
Fire in Nadakacherry in Bengaluru
ಬೆಂಗಳೂರು:
ಬೆಂಗಳೂರಿನಲ್ಲಿ ನಾಡಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಗಳೂರು: ಬೆಂಗಳೂರಿನ ನಾಡಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನ ಕೆಂಗೇರಿ ಉಪನಗರದ ನಾಡಕಚೇರಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿ ಅನಾಹುತದಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿದ ಕೂಡಲೇ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಕೆಂಗೇರಿ ಉಪನಗರದ ನಾಡಕಚೇರಿ ಆವರಣದ ಪ್ರವೇಶ ದ್ವಾರದ ಬಳಿಯೇ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಇಡೀ ಕಚೇರಿಗೆ ಆವರಿಸಿತು. ಬೆಂಕಿ ತೀವ್ರವಾಗಿ ವ್ಯಾಪಿಸಿದ ಹಿನ್ನೆಲೆಯಲ್ಲಿ ನೂರಾರು ದಾಖಲೆಗಳು ಸುಟ್ಟು ಕರಕಲಾಗಿದೆ. ಘಟನೆ ಬಳಿಕ ನಾಡಕಚೇರಿ ಸಿಬ್ಬಂದಿ ದೂರು ನೀಡಿದ್ದು, ಕೆಂಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಂಪ್ಯೂಟರ್ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಮುಖ ದಾಖಲೆಗಳನ್ನ ನಾಶಪಡಿಸುವ ಉದ್ದೇಶದಿಂದ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.ದೂರು ದಾಖಲಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.