Home ಬೆಂಗಳೂರು ನಗರ Fire Mishap at BBMP Head Office: ಮೂರು ತಂಡದಿಂದ ಪ್ರತ್ಯೇಕ ತನಿಖೆ: ಬಿಬಿಎಂಪಿ ಕಚೇರಿ...

Fire Mishap at BBMP Head Office: ಮೂರು ತಂಡದಿಂದ ಪ್ರತ್ಯೇಕ ತನಿಖೆ: ಬಿಬಿಎಂಪಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ

8
0
Fire Mishap at BBMP Head Office: Three teams to conduct Separate investigation: DK Shivakumar
Fire Mishap at BBMP Head Office: Three teams to conduct Separate investigation: DK Shivakumar
Advertisement
bengaluru

ಬೆಂಗಳೂರು:

ಅಗ್ನಿ ಅನಾಹುತ ನಡೆದ ಗುಣಮಟ್ಟ ಪರಿಶೀಲನೆ ಪ್ರಯೋಗಾಲಯ ಇರುವ ಜಾಗವೇ ಇದಲ್ಲ. ಮುಖ್ಯಮಂತ್ರಿಗಳು ಕೂಡ ಅದನ್ನೇ ಗಮನಿಸಿದ್ದಾರೆ. ಇಂತಹ ಪ್ರಯೋಗಾಲಯ ಸುರಕ್ಷಿತ ಜಾಗದಲ್ಲಿ ಇಡಬೇಕು. ಹೀಗಾಗಿ ಇದನ್ನು ಸ್ಥಳಾಂತರ ಮಾಡಲಾಗುವುದು.

ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಅವಘಡದ ಕುರಿತು ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳು ಪ್ರತ್ಯೇಕ ತನಿಖೆ ಮಾಡಲಿವೆ.

ಈ ಅವಘಡದಲ್ಲಿ ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸೂಚನೆ ನೀಡಿದೆ. ಗಾಯಾಳುಗಳನ್ನು ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಅವರ ಶೀಘ್ರ ಗುಣಮುಖಕ್ಕೆ ಎಲ್ಲಾ ನೆರವು ನೀಡುತ್ತೇವೆ. ಅದೃಷ್ಟವಶಾತ್ ಯಾರಿಗೂ ದೃಷ್ಟಿಗೆ ತೊಂದರೆ ಆಗಿಲ್ಲ.

bengaluru bengaluru

ಮುಖ್ಯ ಇಂಜಿನಿಯರ್ ಗಳಿಂದ ಗಾಯಗೊಂಡವರು ಯುವಕರಾಗಿದ್ದು, ಅವರಿಗೆ ಉಜ್ವಲ ಭವಿಷ್ಯವಿದೆ. ಅವರಿಗೆ ಈ ರೀತಿ ಆಗಬಾರದಿತ್ತು.

WhatsApp Image 2023 08 11 at 11.53.20 PM

ಈ ಅವಘಡಕ್ಕೆ ಸಂಬಂಧಿಸಿದಂತೆ ನಾನು ಯಾರ ಮೇಲೂ ದೂರಲು ಹೋಗುವುದಿಲ್ಲ. ಉಳಿದಂತೆ ನಾನು ತನಿಖೆ ಮುಗಿಯುವವರೆಗೂ ಯಾವುದರ ಬಗ್ಗೆ ಹೇಳಿಕೆ ನೀಡುವುದಿಲ್ಲ.

ಇದು ಪೂರ್ವನಿಯೋಜಿತ ಎಂಬ ವಿರೋಧ ಪಕ್ಷದ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮಾತಾಡಬೇಕು ಮಾತನಾಡಲಿ ಬಿಡಿ” ಎಂದರು.


bengaluru

LEAVE A REPLY

Please enter your comment!
Please enter your name here