Home ಚಿತ್ರದುರ್ಗ ಮೊಳಕಾಲ್ಮೂರು ಬಳಿ ಭೀಕರ ಅಪಘಾತ- ಸ್ಥಳದಲ್ಲಿಯೇ ಐವರ ದಾರುಣ ಸಾವು

ಮೊಳಕಾಲ್ಮೂರು ಬಳಿ ಭೀಕರ ಅಪಘಾತ- ಸ್ಥಳದಲ್ಲಿಯೇ ಐವರ ದಾರುಣ ಸಾವು

41
0

ಚಿತ್ರದುರ್ಗ:

ಚಿತ್ರದುರ್ಗ ಮೊಳಕಾಲ್ಮೂರು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದು, ಇತರೆ 16 ಜನರು ಗಾಯಗೊಂಡಿದ್ದಾರೆ.

ಭಾನುವಾರ ಮುಂಜಾನೆ ಮೊಳಕಾಲ್ಮೂರು ತಾಲೂಕಿನ ಬಿ. ಜಿ. ಕೆರೆ ಗ್ರಾಮದ ಬಳಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Screenshot 984

ಮೃತಪಟ್ಟವರೆಲ್ಲರೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನವರು ಎಂದು ಹೇಳಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಿಂದ ಕ್ರೂಸರ್ ಬೆಂಗಳೂರಿಗೆ ತೆರಳುತ್ತಿತ್ತು. ಬೆಂಗಳೂರಿನಿಂದ ಲಿಂಗಸಗೂರಿನತ್ತ ಬಸ್ ತೆರಳುತ್ತಿತ್ತು ಎನ್ನಲಾಗಿದೆ . ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. UNI

LEAVE A REPLY

Please enter your comment!
Please enter your name here