ಬೆಂಗಳೂರು:
ಬೆಂಗಳೂರಿನಲ್ಲಿ ಬಂಧಿಸಲಾಗಿದ್ದ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.
ಬಂಧಿತ ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ನನ್ನು ಇಂದು ಸಿಸಿಬಿ ಕೋರ್ಟ್ ಗೆ ಹಾಜರುಪಡಿಸಿದ್ದು 15 ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಆದರೆ ನ್ಯಾಯಾಲಯ 7 ದಿನಗಳ ಕಾಲ ಕಸ್ಟಡಿಗೆ ನೀಡಿದೆ.
ಬಂಧಿತ ಶಂತಕ ಉಗ್ರರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸಿಸಿಬಿಯು ನಗರದ ವಿವಿಧ ಪ್ರದೇಶಗಳಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ಅವರಿಂದ ಅನೇಕ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ.