Home ಆರೋಗ್ಯ ಲಸಿಕೆ ಪಡೆದ ಐವರು ವೈದ್ಯರಿಗೆ ಕೊರೊನಾ ಪಾಸಿಟಿವ್

ಲಸಿಕೆ ಪಡೆದ ಐವರು ವೈದ್ಯರಿಗೆ ಕೊರೊನಾ ಪಾಸಿಟಿವ್

122
0

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಪ್ರಕಾರ ಲಸಿಕೆ ಪಡೆದ ವ್ಯಕ್ತಿಯು ವೈರಸ್ ಸಂಪರ್ಕಕ್ಕೆ ಬಂದರೆ, ಅವರು ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು

ಚಾಮರಾಜನಗರ/ಬೆಂಗಳೂರು:

ವಾರದ ಹಿಂದೆ ಕೊರೊನಾ ಲಸಿಕೆ ಪಡೆದಿದ್ದ ಚಾಮರಾಜನಗರ ಐದು ಮಂದಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈಗ ಪಾಸಿಟಿವ್ ಬಂದಿರುವುದರಿಂದ ಸಾರ್ವಜನಿಕರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐದು ಮಂದಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕೊರೊನಾ ಲಸಿಕೆ ನೀಡಲಾಗಿತ್ತು.

ಬೆಂಗಳೂರು ಲೈವ್ ಜೊತೆ ಮಾತನಾಡುತ್ತಾ ಚಾಮರಾಜನಗರ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರವಿ ಅವರ ಪ್ರಕಾರ ಮೂವರು ಕೊವಾಕ್ಸಿನ್, ಇಬ್ಬರು ಕೋವಿಶೀಲ್ಡ್ ಲಸಿಕೆ ಪಡೆದಿದ್ದರು. ವೈದ್ಯರ ಜೊತೆ ಸಂಪರ್ಕದಲ್ಲಿದ್ದವರಿಗೂ ಪರೀಕ್ಷೆ ನಡೆಸಲಾಗಿದೆ. ಲಸಿಕೆ ಪಡೆದ ಐವರಿಗಷ್ಟೇ ಕೊರೋನಾ ಬಂದಿದೆ. ಉಳಿದ ಸಿಬ್ಬಂದಿಗಳಿಗೆ ಕೊರೋನಾ ಪ್ರಕರಣ ಕಂಡುಬಂದಿಲ್ಲ. ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ ಎಲ್ಲರೂ ಕೂಡ ಆರೋಗ್ಯವಾಗಿದ್ದಾರೆ ಎಂದು ಅವರ ಸ್ಪಷ್ಟನೆ ನೀಡಿದ್ದಾರೆ.

ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಪ್ರಕಾರ ಲಸಿಕೆ ಪಡೆದ ವ್ಯಕ್ತಿಯು ವೈರಸ್ ಸಂಪರ್ಕಕ್ಕೆ ಬಂದರೆ, ಅವರು ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚು. ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ.

ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ: “ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದ್ದು, ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. “

“ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೊನಾ ಲಸಿಕೆಯ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ,” ಸುಧಾಕರ್ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here