Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಆಗಸ್ಟ್ 15 ರಂದು 9.00 ಗಂಟೆಗೆ ಮುಖ್ಯಮಂತ್ರಿ ಅವರಿಂದ ಧ್ವಜಾರೋಹಣ — ಬಿಬಿಎಂಪಿ ಮುಖ್ಯ...

ಬೆಂಗಳೂರಿನಲ್ಲಿ ಆಗಸ್ಟ್ 15 ರಂದು 9.00 ಗಂಟೆಗೆ ಮುಖ್ಯಮಂತ್ರಿ ಅವರಿಂದ ಧ್ವಜಾರೋಹಣ — ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್

39
0
Flag hoisting by Chief Minister at 9.00 am on 15th August in Bengaluru — BBMP Chief Commissioner Tushar Giri Nath
Flag hoisting by Chief Minister at 9.00 am on 15th August in Bengaluru — BBMP Chief Commissioner Tushar Giri Nath

ಬೆಂಗಳೂರು:

ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು ಆಗಸ್ಟ್ 15 ರಂದು ಬೆಳಗ್ಗೆ 8.58 ಕ್ಕೆ ಮುಖ್ಯಮಂತ್ರಿಗಳು ಮೈದಾನದಕ್ಕೆ ಆಗಮಿಸಲಿದ್ದು, 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಹೇಳಿದ್ದಾರೆ.

ಧ್ವಜಾರೋಣದ ನಂತರ ಮಾನ್ಯ ಮುಖ್ಯಮಂತ್ರಿಗಳ ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಲಿದ್ದಾರೆ. ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಪಥ ಸಂಚಲನದಲ್ಲಿ ಭಾಗವಹಿಸಲಿದ್ದಾರೆ. ಪದ ದೇವರಾಜ್ ಅವರ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆ.ಪಿ.ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು “ವೀರ ನಮನ” ನೃತ್ಯ ಪ್ರದರ್ಶಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

WhatsApp Image 2023 08 13 at 9.24.30 PM

ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿಯ ಬಿ.ಬಿ.ಎಂ.ಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ ‘ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ’ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ ‘ರೋಪ್ ಸ್ಕಿಪಿಂಗ್’ ಕಾರ್ಯಕ್ರಮ ಹಾಗೂ ಎಂ.ಇ. ಜಿ ಸೆಂಟರ್ ತಂಡದವರು “ಕಲಾರಿಪಯಟ್ಟು”, ಎ.ಎಸ್.ಸಿ ತಂಡದವರಿಂದ “ಟೆಂಟ್ ಪೆಗ್ಗಿಂಗ್” ಹಾಗೂ ಎ.ಎಸ್.ಸಿ ತಂಡ ಇವರಿಂದ “ಮೊಟರ್ ಸೈಕಲ್” ಸಾಹಸ ಪ್ರದರ್ಶನ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here