ಬೆಂಗಳೂರು, ಮಾರ್ಚ್ 26: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸುತ್ತಿದ್ದು ರಾಗಿಯ ಗುಣಮಟ್ಟದ ಕುರಿತು ಇಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಯಲಹಂಕದ ಸಗಟು ಗೋದಾಮಿಗೆ ದಿಢೀರ್ ಭೇಟಿ ನೀಡಿ, ಅಕ್ಕಿ ಮತ್ತು ರಾಗಿಯ ದಾಸ್ತಾನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಆಹಾರ ನಾಗರಿಕ ಸರಬರಾಜು ನಿಗಮದ ನಿರ್ದೇಶಕ ಚಂದ್ರಕಾಂತ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
rice and millet storage warehouse