Home High Court/ಹೈಕೋರ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟ: ಜನಸಾಮಾನ್ಯರಿಗೆ ತಿಳಿಯಬೇಕು’ ಎಂದ ಹೈಕೋರ್ಟ್!

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟ: ಜನಸಾಮಾನ್ಯರಿಗೆ ತಿಳಿಯಬೇಕು’ ಎಂದ ಹೈಕೋರ್ಟ್!

5
0
Karnataka High Court

ಬೆಂಗಳೂರು: ಜನಸಾಮಾನ್ಯರಿಗೆ ತಿಳಿಯಬೇಕು ಎಂದು ಹೇಳುವ ಮೂಲಕ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾ.ಕೃಷ್ಣ ದೀಕ್ಷಿತ್ ಆದೇಶ ಹೊರಡಿಸಿದ್ದಾರೆ.

ಇಂದು ತೀರ್ಪು ಪ್ರಕಟಿಸುವುದಕ್ಕೂ ಮುನ್ನ ನ್ಯಾ.ದೀಕ್ಷಿತ್, “ನಮ್ಮ ಎಲ್ಲ ತೀರ್ಪುಗಳನ್ನು ಇಂಗ್ಲಿಷ್‌ನಲ್ಲಿ ನೀಡುತ್ತಿದ್ದೇವೆ. ಅದು ಜನಸಾಮಾನ್ಯರಿಗೆ ಅರ್ಥವಾಗುವುದು ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಡಿಸೆಂಬರ್ 11 ರಂದು ಭಾರತ ಭಾಷಾ ದಿವಸದ ಪ್ರಯುಕ್ತ ಸಾಂಕೇತಿಕವಾಗಿ ಇಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.

ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು. ಇಂಗ್ಲೆಂಡ್​ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730ರಿಂದ ಅವರ ಸ್ವಭಾಷೆ ಇಂಗ್ಲಿಸ್​ನಲ್ಲೇ ಕಲಾಪ ಆರಂಭಿಸಿದ್ದರು. ಆದ್ರೆ, ಜನಸಾಮಾನ್ಯರಿಗೆ ಕೋರ್ಟ್​ಗಳ ತೀರ್ಪು ಏನಿದೆ ಎಂದು ತಿಳವ್ಯವಹರಿಸುವಂತಾಗಬೇಕು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೈರ್ತಿ ಸಿ.ಎಂ.ಜೋಶಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here