ಬೆಂಗಳೂರು:
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು ನಕಲಿ ಪತ್ರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೆಸರಿನಲ್ಲಿ ನಕಲಿ ಪತ್ರವೊಂದನ್ನು ಬರೆದಿದ್ದಾರೆ. ಇದು ನಾನು ಬರೆದ ಪತ್ರ ಅಲ್ಲವೇ ಅಲ್ಲ. ಕೆಲವು ಕುತಂತ್ರಿಗಳು ನಕಲಿ ಪತ್ರವನ್ನು ಸೃಷ್ಟಿಮಾಡಿ ನನಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲು ಅಥವಾ ಭಿನ್ನಾಭಿಪ್ರಾಯಗಳು ಇವೆ ಎಂದು ಅಪಪ್ರಚಾರ ಮಾಡಲು ಇಂತಹ ಹುನ್ನಾವರನ್ನು ಮಾಡಿದ್ದಾರೆ. ನಾನು ಮತ್ತೊಮ್ಮೆ ಸ್ಪಷ್ಟಪಡಿಸಲಿಕ್ಕೆ ಬಯಸುತ್ತೇನೆ, ‘ಇದು ನಕಲಿ ಪತ್ರ, ನಾನು ಬರೆದ ಪತ್ರವಲ್ಲ’. ಇದನ್ನು ಆರ್.ಎಸ್.ಎಸ್ ನಂತ ಕುತಂತ್ರಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ಪತ್ರವನ್ನು ತಿರಸ್ಕರಿಸಬೇಕು ಎಂದು ಎಲ್ಲರಲ್ಲೂ ಮನವಿ ಮಾಡುತ್ತೇನೆ,”
ನಾಡಿನ ಮಹಾಜನತೆಯಲ್ಲಿ ಮನವಿ,
— Siddaramaiah (@siddaramaiah) May 9, 2023
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೆಸರಿನಲ್ಲಿ ನಕಲಿ ಪತ್ರವೊಂದನ್ನು ಬರೆದಿದ್ದಾರೆ. ಇದು ನಾನು ಬರೆದ ಪತ್ರ ಅಲ್ಲವೇ ಅಲ್ಲ. ಕೆಲವು ಕುತಂತ್ರಿಗಳು ನಕಲಿ ಪತ್ರವನ್ನು ಸೃಷ್ಟಿಮಾಡಿ ನನಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲು… pic.twitter.com/KSdYN7lpzK
…”ಈ ಬಗ್ಗೆ ಚುನಾವಣಾ ಆಯೋಗ ಮತ್ತು ಪೊಲೀಸರಿಗೆ ದೂರು ನೀಡುತ್ತೇನೆ. ಈ ನಕಲಿ ಪತ್ರದ ಹಿಂದೆ ಯಾರಿದ್ದಾರೆ ಎಂಬುದನ್ನು ಬಯಲಿಗೆಳೆಯಲು ಮತ್ತು ಅಂಥವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ದೂರು ಸಲ್ಲಿಸುವವನಿದ್ದೇನೆ,” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು ಎಂದು ಹೇಳಿದ್ದಾರೆ.