ಬೆಂಗಳೂರು : ಲೋಕಸಭಾ ಸದಸ್ಯ ಸ್ಥಾನ ತೊರೆದ ಬೆನ್ನಲ್ಲೇ ಬಿಜೆಪಿಯ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಇಂದು(ಬುಧವಾರ) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ನಿನ್ನೆ ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನದ ಜೊತೆಗೆ ಸಂಸದ ಸ್ಥಾನಕ್ಕೂ ರಾಜಿನಾಮೆ ನೀಡಿದ್ದರು.
ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಜೊತೆಗೆ ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ ಸೇರಿ ಮತ್ತಿತರರು ಬುಧವಾರ ಕಾಂಗ್ರೆಸ್ ಸೇರಿದರು.