Home ಬೆಂಗಳೂರು ನಗರ ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ

25
0
bengaluru

ಬೆಂಗಳೂರು:

ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಜೊತೆಗಿದ್ದರು.

bengaluru

Also Read: Ex CM S M Krishna to be chief guest at Mysuru Dasara festival

bengaluru

LEAVE A REPLY

Please enter your comment!
Please enter your name here