ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ಹಂಸಾ ಮೊಯ್ಲಿ ನಿಧನ
ಬೆಂಗಳೂರು : ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿವುದಾಗಿ ವರದಿಯಾಗಿದೆ.
ಹಂಸಾ ಮೊಯ್ಲಿ(46) ಕೆಲ ದಿನಗಳಿದಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಂಸಾ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು.
