Home ಮಂಡ್ಯ ಅಭಿಮಾನಿ ಆತ್ಮಹತ್ಯೆ: ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ

ಅಭಿಮಾನಿ ಆತ್ಮಹತ್ಯೆ: ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಸಿದ್ದರಾಮಯ್ಯ

77
0

ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಬರೆದು ರಾಮಕೃಷ್ಣನ ಆತ್ಮಕ್ಕೆ ಶಾಂತಿ ಕೋರಿದ್ದಾರೆ

ಮಂಡ್ಯ/ಬೆಂಗಳೂರು:

ತನ್ನ ಅಂತ್ಯಕ್ರಿಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಕೊನೆ ಆಸೆಯಂತೆ ಸಿದ್ದರಾಮಯ್ಯ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ(24) ಆತ್ಮಹತ್ಯೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದ. ಸಾವಿಗೂ ಮುನ್ನ “ನನ್ನ ಸಾವಿಗೆ ನಟ ಯಶ್, ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಬೇಕು. ಯಾಕೆಂದರೆ ನಾನು ಇವರಿಬ್ಬರ ಅಪ್ಪಟ ಅಭಿಮಾನಿ” ಎಂದು ಪತ್ರ ಬರೆದಿದ್ದ.

ಯುವಕನ ಕೊನೆ ಆಸೆಯ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿದ ಸಿದ್ದರಾಮಯ್ಯ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು.

ರಾಮಕೃಷ್ಣನ ಅಭಿಮಾನಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿದ್ದಾರೆ. ಈ ಥರದ ಅಭಿಮಾನ ಯಾವ ಅಭಿಮಾನಿಗೂ ಮಾಡದರಿಯಾಗದಿರಲಿ ಅನ್ನೋ ಟ್ವೀಟ್ ಬರೆದು ರಾಮಕೃಷ್ಣನ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕೆಂದು ಪತ್ರ ಬರೆದು ಯುವಕ ನೇಣಿಗೆ ಶರಣ https://kannada.thebengalurulive.com/mandya-youth-commits-suicide-wishes-siddaramaiah-and-actor-yash-should-attend-his-funeral-and-surrenders-to-the/

LEAVE A REPLY

Please enter your comment!
Please enter your name here