Home ರಾಜಕೀಯ ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

24
0

ಮೈಸೂರು/ಬೆಂಗಳೂರು: ಮಾಜಿ ಸಿಎಂ ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ ಹೊಂದಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಾಪುಸಿ ನಿಧನರಾಗಿದ್ದಾರೆ.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು.

ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಇಂದು ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

LEAVE A REPLY

Please enter your comment!
Please enter your name here