Home ಬೆಂಗಳೂರು ನಗರ ಮಾಜಿ ಐಎಎಸ್, ಸಚಿವ ಜೆ ಅಲೆಕ್ಸಾಂಡರ್ ನಿಧನ

ಮಾಜಿ ಐಎಎಸ್, ಸಚಿವ ಜೆ ಅಲೆಕ್ಸಾಂಡರ್ ನಿಧನ

54
0
Former IAS, minister J Alexander passes away

ಬೆಂಗಳೂರು:

ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ನಾಯಕ ಜೆ ಅಲೆಕ್ಸಾಂಡರ್ ಶುಕ್ರವಾರ ನಿಧನರಾದರು. ಅವರಿಗೆ 83 ವರ್ಷ.

ಶನಿವಾರ ಅವರ ಅಂತಿಮ ಸಂಸ್ಕಾರ ನೆರವೇರಲಿದೆ. ಅವರು ಇಬ್ಬರು ಮಕ್ಕಳು ಮತ್ತು ನಾಲ್ವರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಅನಾರೋಗ್ಯದ ಕಾರಣ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Also Read: Former IAS, minister J Alexander passes away

ಅಲೆಕ್ಸಾಂಡರ್ ಕೇರಳ ಮೂಲದವರಾಗಿದ್ದು, 1963 ರಲ್ಲಿ ಕರ್ನಾಟಕವನ್ನು ತಮ್ಮ ಕೇಡರ್ ಆಗಿ ಐಎಎಸ್ ಸೇರಿದರು. 1992ರಲ್ಲಿ ಮುಖ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ನಂತರ ಅವರು ಕಾಂಗ್ರೆಸ್ ಸೇರಿದರು ಮತ್ತು ಬೆಂಗಳೂರಿನ ಹಿಂದಿನ ಭಾರತೀನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದರು.7

ಮುಖ್ಯಮಂತ್ರಿ ಸಂತಾಪ

ಮಾಜಿ ಸಚಿವ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಜೆ. ಅಲೆಕ್ಸಾಂಡರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಲೆಕ್ಸಾಂಡರ್ ಅವರು ಐಎಎಸ್ ಅಧಿಕಾರಿಯಾಗಿ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿ ಸೈ ಎನಿಸಿಕೊಂಡವರು. ನಂತರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಆಡಳಿತ ಸೇವೆ ನಂತರ ಅವರು ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. ಚುನಾವಣೆಯಲ್ಲಿ ಗೆದ್ದು ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ನಿಧನದ ಸುದ್ದಿ ನನಗೆ ಬೇಸರ ತರಿಸಿದೆ ಎಂದು ಅವರು ತಿಳಿಸಿದ್ದಾರೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಕೋರುತ್ತೇನೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here