Home ರಾಜಕೀಯ ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

18
0
Advertisement
bengaluru

ಬೆಂಗಳೂರು:

ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ , ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ಸೋಮವಾರ ಮುಂಜಾನೆ ಹೊಂದಿದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಅವರು ತಮ್ಮ ಗಂಗಾನಗರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ಹೇಳಿವೆ.. 2008 ರಲ್ಲಿ ಯಡಿಯೂರಪ್ಪ ಸಂಪುಟದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆಯ ಸಚಿವರಾಗಿದ್ದರು.

ಬಿಜೆಪಿಯಿಂದ ಮುಮ್ತಾಜ್ ಅಲಿಖಾನ್ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತಗೊಂಡಿದ್ದರು. 2013ರಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು..ಬಿಜೆಪಿಯಲ್ಲಿ ಕೆ. ಎಸ್. ಈಶ್ವರಪ್ಪ ಅವರಿಂದ ಬಹಳ ಅನ್ಯಾಯವಾಗಿದೆ. ಎಂದು ಹೇಳಿ ಪಕ್ಷ ತ್ಯಜಿಸಿ ನಂತರ ಕಾಂಗ್ರೆಸ್ ಸೇರಿದ್ದರು. 2002ರಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ, ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೂ ಅವರು ಭಾಜನರಾಗಿದ್ದರು.

bengaluru bengaluru

ಮುಖ್ಯಮಂತ್ರಿ ಸಂತಾಪ

ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ, ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ.

ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ ಹಾಗೂ ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಯವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here