ಮಂಡ್ಯ:
ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಶನಿವಾರ ಭಾರತೀನಗರದ ಜಿ.ಮಾದೇಗೌಡ (94 ವರ್ಷ) ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಮಾದೇಗೌಡರು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು. ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು.
ಮುಖ್ಯಮಂತ್ರಿಗಳ ಸಂತಾಪ
ಹಿರಿಯ ರಾಜಕಾರಣಿ, ಮಾಜಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಸಚಿವ ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವರು, ಮಾಜಿ ಸಂಸದರಾದ ಶ್ರೀ ಜಿ.ಮಾದೇಗೌಡರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಹಿರಿಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) July 17, 2021
ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ G. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟುಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ. pic.twitter.com/jOP9pPXWjF
— H D Kumaraswamy (@hd_kumaraswamy) July 17, 2021
ಕಾವೇರಿ ಹೋರಾಟಕ್ಕೆ ಬದುಕನ್ನು ಅರ್ಪಿಸಿಕೊಂಡಿದ್ದ ಮಾಜಿ ಸಂಸದ ಜಿ.ಮಾದೇಗೌಡರ ನಿಧನದಿಂದಾಗಿ ಹಳೆ ತಲೆಮಾರಿನ ಅಪರೂಪದ ರಾಜಕೀಯ ಹೋರಾಟಗಾರರೊಬ್ಬರನ್ನು ಕಳೆದುಕೊಂಡು ನಾಡು ಬಡವಾಗಿದೆ.
— Siddaramaiah (@siddaramaiah) July 17, 2021
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/rQtd8NtxUj