ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಆರೋಪಿಯಾದ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ಅನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇರೆಗೆ ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದ ಮೇಲೆ ಮೈಸೂರಿನ ಕೆ.ಆರ್.ನಗರದಲ್ಲಿ ದಾಖಲಾಗಿರುವ ಪ್ರಕರಣ ಸಹಿತ ಈ ಎರಡು ಪ್ರಕರಣಗಳಲ್ಲಿ ಯಾವುದೇ ಉರಳಿಲ್ಲ. ಅಲ್ಲದೆ, ತಮ್ಮ ವಿರುದ್ದ ರಾಜಕೀಯ ಪ್ರೇರಿತವಾಗಿ ಕೇಸ್ ದಾಖಲು ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.