Home ಹುಬ್ಬಳ್ಳಿ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಪದಾರ್ಪಣೆ

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಪದಾರ್ಪಣೆ

37
0
Former MLA Madhu Bangarappa joins Congress

ಹುಬ್ಬಳ್ಳಿ:

ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇಂದು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಗೆ ಪದಾರ್ಪಣೆ ಮಾಡಿದರು.

ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.

LEAVE A REPLY

Please enter your comment!
Please enter your name here