ಬೆಳಗಾವಿ:
ರೈತ ಮುಖಂಡ, ಕೇಂದ್ರ ಸರ್ಕಾರದ ಮಾಜಿ ಸಚಿವ ಬಾಬಗೌಡ ರುದ್ರಗೌಡ ಪಾಟೀಲ್ ಶುಕ್ರವಾರ ನಸುಕಿನ ಜಾವ ನಿಧನರಾಗಿದ್ದಾರೆ.ಅವರಿಗೆ 80 ವರ್ಷ ವಯಸ್ಸಾಗಿತ್ತು.
ತೀವ್ರ ರಕ್ತದ ಒತ್ತಡದಿಂದ ವಾರದ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎನ್ ಡಿಎ ಸರ್ಕಾರದಲ್ಲಿ ಬಾಬಗೌಡ ಪಾಟೀಲ್ ಸಂಪುಟ ದರ್ಜೆ ಸಚಿವರಾಗಿದ್ದರು.1998ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಅಭ್ಯರ್ಥಿಯಾಗಿ ಪ್ರತಿನಿಧಿಸಿ ಸಂಸದರಾಗಿ ಗೆದ್ದುಬಂದು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು.
ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದ ರೈತಪರ ಕಾಳಜಿ ಹೊಂದಿದ್ದ ನಾಯಕರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ
— CM of Karnataka (@CMofKarnataka) May 21, 2021