ಮಂಗಳೂರು:
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 18ರಂದು ಯೋಗ ಮಾಡುವ ಸಂದರ್ಭದಲ್ಲಿ ಅವರು ಮನೆಯಲ್ಲಿ ಜಾರಿದ್ದು ಮೆದುಳಿಗೆ ಗಾಯವಾಗಿತ್ತು.
1972 ರಲ್ಲಿ ಉಡುಪಿ ಮುನ್ಸಿಪಾಲಿಟಿಯ ಸದಸ್ಯರಾಗಿ ಮೊದಲ ಬಾರೀಗೆ ರಾಜಕೀಯ ಪ್ರವೇಶ ಮಾಡಿದ್ದ ಅಸ್ಕರ್, 1980ರಲ್ಲಿ ಮೊದಲ ಬಾರಿ ಉಡುಪಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಒಟ್ಟು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಸೋನಿಯಾ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಆಸ್ಕರ್ ಫರ್ನಾಂಡಿಸ್ ರಾಜ್ಯಸಭಾ ಸದಸ್ಯರಾಗಿದ್ದರು.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದ್ದಾಗ ಅವರು ಕೇಂದ್ರ ಸಾರಿಗೆ,ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಕರಾವಳಿ ಕಾಂಗ್ರೆಸ್ ನ ಪ್ರಭಾವಿ ನಾಯಕರಾಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನ ರಾಜ್ಯದ ವಿವಿಧ ಪಕ್ಷಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.