ಬೆಂಗಳೂರು , ಫೆಬ್ರವರಿ 11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಉದ್ಘಾಟನೆ ಹಾಗೂ ಬಾಲಬ್ರೂಯಿ (Balabrooie) ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಶಾಸಕರುಗಳು, ಮಾಜಿ ಶಾಸಕರುಗಳು, ಸಂಸದರುಗಳು ಹಾಗೂ ಅವರ ಕುಟುಂಬದ ಸದಸ್ಯರುಗಳು ಕಾಲ ಕಳೆಯಲು ಅನೂಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ವಿಧಾನ ಮಂಡಲ ಸಂಸ್ಥೆಯನ್ನು ಇಂದಿನಿಂದ ಪ್ರಾರಂಭಿಸಲಾಗಿದೆ ಎಂದು ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ ಉದ್ಘಾಟನೆ ಹಾಗೂ ಬಾಲಬ್ರೂಯಿ ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. pic.twitter.com/ixMgvhpvVB
— CM of Karnataka (@CMofKarnataka) February 12, 2024
ಸೋಮವಾರ ಇಲ್ಲಿನ ಬಾಲಬ್ರೂಯಿಯಲ್ಲಿ ಹಮ್ಮಿಕೊಂಡಿದ್ದ ವಿಧಾನ ಮಂಡಲ ಸಂಸ್ಥೆಯ ಉದ್ಘಾಟನೆ ಮತ್ತು ಬಾಲಬ್ರೂಯಿ ಕಟ್ಟಡವನ್ನು ಪಾರಂಪರಿಕ ವಿನ್ಯಾಸಕ್ಕೆ ಒಳಪಟ್ಟು ನವೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಅಧಿವೇಶನದ ಸಂದರ್ಭದಲ್ಲಿ ವಿಧಾನಸೌಧಕ್ಕೆ ಆಗಮಿಸುವ ಶಾಸಕರುಗಳಿಗೆ, ಮಹಿಳಾ ಶಾಸಕರುಗಳಿಗೆ ಕುಳಿತುಕೊಂಡು ಚರ್ಚಿಸಲು ಸ್ಥಳವಿರಲಿಲ್ಲ. ದಿಲ್ಲಿಯಲ್ಲಿರುವ ಕಾನ್ಸುಟುಯೆನ್ಸಿ ಕ್ಲಬ್ ರೀತಿ, ವಿಧಾನಮಂಡಲ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಶಾಸಕರುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ಯು.ಟಿ.ಖಾದರ್, ಇಂಧನ ಸಚಿವ ಕೆ.ಜೆ.ಜಾರ್ಜ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಮಂಡಲ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೌಜಲಗಿ ಮಹಂತೇಶ್ ಶಿವಾನಂದ, ಸಂಸ್ಥೆಯ ಖಚಾಂಚಿ ಹಂಪನಗೌಡ ಬಾದರ್ಲಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.