Home ಮಂಡ್ಯ Mandya: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವು

Mandya: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವು

87
0
Four people died on spot after car collided with lorry from behind

ಮಂಡ್ಯ:

ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ನಡೆದಿದೆ. ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಈ ಅಪಘಾತ ನಡೆದಿದೆ.

ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ‌ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ತಿರುಮಲಪುರ ಗೇಟ್ ಬಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿಡೆ. ಕಾರಿನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

LEAVE A REPLY

Please enter your comment!
Please enter your name here