ಕೊಳ್ಳೆಗಾಲ(ಚಾಮರಾಜನಗರ):
ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ಐದಕ್ಕೂ ಹೆಚ್ಚು ಸಾರಿಗೆ ಬಸ್‌ಗಳ ಬಾಗಿಲುಗಳೇ ಕಿತ್ತು ಬಂದಿವೆ.
ನಾಳೆ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಹಿಳೆಯರು ತೋರಿದ ಶಕ್ತಿಗೆ ಬಸ್ವೊಂದರ ಬಾಗಿಲು ಕಳಚಿ ಹೋಗಿದೆ. ಕೆಎಸ್ ಆರ್ ಟಿಸಿ ಬಸ್ ನ ಬಾಗಿಲು ಮುರಿದು ಅದನ್ನು ನಿರ್ವಾಹಕ ಕೈಲಿ ಹಿಡಿದಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯರಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವಾರ ಕಳೆದಿದ್ದು, ಮಹಿಳೆಯರ ಸಂಖ್ಯೆ ಏರಿಕೆಯಾಗಿದ್ದರ ಪರಿಣಾಮ ನಿರ್ವಾಹಕರು ಉಳಿದವರಿಗೆ ಟಿಕೆಟ್ ನೀಡಲಿಕ್ಕೂ ಪರದಾಡಬೇಕಾದಂಥ ಘಟನೆಗಳೂ ವರದಿಯಾಗಿದೆ.