
Free electricity applicable to tenants also, not applicable to commercial buildings: Chief Minister Siddaramaiah
ಬೆಂಗಳೂರು:
ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ. 200 ಯೂನಿಟ್ ಒಳಗೆ ವಿದ್ಯುತ್ ಉಪಯೋಗಿಸುವ ಎಲ್ಲರಿಗೂ ಉಚಿತವಾಗಿರುತ್ತದೆ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಬಳಸುವವರಿಗೆ ಮಾತ್ರ ಈ ನಿಯಮ ಅನ್ವಯ ಆಗಲ್ಲ ಎಂದು ಪುನರುಚ್ಚರಿಸಿದ್ದಾರೆ.