Home ಬೆಂಗಳೂರು ನಗರ ನಾಳೆಯಿಂದ (July 1) ಅನ್ನಭಾಗ್ಯ ಯೋಜನೆ ಜಾರಿ, 5 ಕೆಜಿ ಅಕ್ಕಿ ಜತೆ ಜನರ ಖಾತೆಗೆ...

ನಾಳೆಯಿಂದ (July 1) ಅನ್ನಭಾಗ್ಯ ಯೋಜನೆ ಜಾರಿ, 5 ಕೆಜಿ ಅಕ್ಕಿ ಜತೆ ಜನರ ಖಾತೆಗೆ ಹಣ ಜಮೆ

11
0
From tomorrow (July 1) Annabhagya Yojana will be implemented, money will be deposited in people's accounts along with 5 kg of rice
From tomorrow (July 1) Annabhagya Yojana will be implemented, money will be deposited in people's accounts along with 5 kg of rice
Advertisement
bengaluru

ಬೆಂಗಳೂರು:

ಕರ್ನಾಟಕದಲ್ಲಿ ನಾಳೆಯಿಂದ(July 1) ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್​.ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಮದಿಗೆ ಮಾತನಾಡಿದ ಮುನಿಯಪ್ಪ, 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್​ ಅಕೌಂಟ್ ಇದ್ದಾವೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ 5 ಕೆಜಿ ಅಕ್ಕಿ ಸಿಗುವವರೆಗೂ ಖಾತೆಗೆ ಹಣ ಜಮೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಅಕ್ಕಿ ಕೊಡಲು ನಾವು ಸಿದ್ದವಾಗಿದ್ದೇವೆ ಆದ್ರೆ ಕೇಂದ್ರ ಅಕ್ಕಿ ಕೊಟ್ಟಿಲ್ಲ.

bengaluru bengaluru

ಈಗಾಗಲೇ ಈ ಬಗ್ಗೆ ನಿಮಗೆ ಗೊತ್ತಿದೆ. ಅಕ್ಕಿ ಸಿಕ್ಕ ಬಳಿಕ ಅಕ್ಕಿ ಕೊಡುತ್ತೇವೆ. ಸಿಎಂ ಕೂಡ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಅದರಂತೆ ದಕ್ಷಿಣದಲ್ಲಿ ರಾಗಿ ಕೊಡುತ್ತೇವೆ. ಉತ್ತರದಲ್ಲಿ ಜೋಳ ಕೊಡುತ್ತೇವೆ. ರಾಗಿ ದಾಸ್ತಾನು ಇದೆ, ಜೋಳ ದಾಸ್ತಾನು ಇಲ್ಲ. ದಾಸ್ತಾನು ಆದ ಬಳಿಕ ಧಾನ್ಯಗಳ ಹಂಚಿಕೆ ಮಾಡುತ್ತೇವೆ. ಎಂಎಸ್ ಪಿ ಮೂಲಕ ಧಾನ್ಯ ಖರೀದಿ ಮಾಡುತ್ತೇವೆ. ಎರಡು ಕೆಜಿ, ಜೋಳ/ರಾಗಿ ಕೊಡುತ್ತೇವೆ. ಎಂಟು ಕೆಜಿ ಅಕ್ಕಿ ಕೊಡುತ್ತೇವೆ. ಮಾತು ಕೊಟ್ಟಂತೆ ಜುಲೈ 1ರಿಂದ ಯೋಜನೆ ಜಾರಿ ಆಗುತ್ತೆ ಎಂದು ಸ್ಪಷ್ಟಪಡಿಸಿದರು.

ಅನ್ನ ಭಾಗ್ಯ ಯೋಜನೆ ಹಣ ವರ್ಗಾವಣೆ ಮಾಹಿತಿ
ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದ್ದು, 4 ಕೋಟಿ 42 ಲಕ್ಷ ಫಲಾನುಭವಿಗಳಿದ್ದಾರೆ. 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. ಇನ್ನು 1.22 ಕಾರ್ಡ್‌ದಾರರ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಇನ್ನುಳಿದ ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್ ಲಿಂಕ್ ಆಗಬೇಕು. ಆಧಾರ್ ಲಿಂಕ್ ಆಗುತ್ತಿದ್ದಂತೆಯೇ ಬ್ಯಾಂಕ್ ಅಕೌಂಟ್ ಕೂಡ ಕಾರ್ಡ್ ಗಳಿಗೆ ಅಪ್ಡೇಟ್ ಆಗತ್ತೆ. ಹೀಗಾಗಿ ಹೆಚ್ಚು ಗೊಂದಲಕ್ಕೆ ಅವಕಾಶ ಇಲ್ಲ.

ಆಧಾರ್ ಲಿಂಕ್ ಆಗುವುದರಿಂದ ಇ ಗೌರ್ನೆನ್ಸ್ ಮೂಲಕ ಅಕೌಂಟ್ ಮಾಹಿತಿ ಕೂಡ ಸರ್ಕಾರಕ್ಕೆ ಲಭ್ಯ ಆಗಲಿದ್ದು, ಈ ಅಕೌಂಟ್ ಲಿಂಕ್ ಆಗಿರುವ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಇದರಿಂದ ಹಣ ಅಕೌಂಟ್ ಗೆ ಹಾಕುವುದಕ್ಕೆ ಹೆಚ್ಚು ಸಮಸ್ಯೆ ಆಗುವುದಿಲ್ಲ ಎನ್ನುವುದು ಅಧಿಕಾರಿಗಳ ಮಾತು.


bengaluru

LEAVE A REPLY

Please enter your comment!
Please enter your name here