Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Ganesh Chaturthi 2023: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮನವಿ
  • ಬೆಂಗಳೂರು ನಗರ

Ganesh Chaturthi 2023: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನಿಟ್ಟು ಪೂಜಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮನವಿ

The Bengaluru Live September 1, 2023 1:00 PM 1 minute read
Ganesh Chaturthi 2023: BBMP Chief Commissioner Tushar Giri Nath appeals to worship with eco-friendly Ganesha idols

ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಗಣೇಶ ಹಬ್ಬದ ಪ್ರಯುಕ್ತ ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ

ಬೆಂಗಳೂರು:

ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ವಿವಿಧ ಇಲಾಖೆಗಳ ಜೊತೆ ನಡೆದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕೆಲ ಪ್ರದೇಶಗಳಲ್ಲಿ ಕೆರೆಗಳು ವಸತಿ ಪ್ರದೇಶದಿಂದ ದೂರವಿರುವುದರಿಂದ ಸಾರ್ವಜನಿಕರು ಚಿಕ್ಕ-ಚಿಕ್ಕ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ ಪ್ರತಿ ವಲಯಗಳ ಪ್ರಮುಖ ಸ್ಥಳ/ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(ಮೊಬೈಲ್ ಟ್ಯಾಂಕ್)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲು ಸೂಚಿಸಿದರು.

Ganesh Chaturthi 2023: BBMP Chief Commissioner Tushar Giri Nath appeals to worship with eco-friendly Ganesha idols
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಸುತ್ತಮುತ್ತ ಹಾಗೂ ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ ಅಳವಡಿಸಬೇಕು. ಎಲ್ಲಾ ವಿಸರ್ಜನಾ ಕೇಂದ್ರಗಳಲ್ಲೂ ಪಾಳಿಯನುಸಾರ ನುರಿತ ಈಜುಗಾರರನ್ನು ಮತ್ತು ಅಗತ್ಯ ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಆಯಾ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ ಸಿಸಿಟಿವಿ, ವಿದ್ಯುತ್ ದ್ವೀಪಗಳ ಸೌಲಭ್ಯಗಳನ್ನು ತಪ್ಪದೇ ಅಳವಡಿಸಲು ಸೂಚಿಸಿದರು.

ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು(ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು) ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಅಗಿದ್ದಾಂಗೆ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ತಿಳಿಸಿದರು.

ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ದೋಣಿಗಳ ವ್ಯವಸ್ಥೆ, ನೀರೆತ್ತುವ ಪಂಪ್‌ಗಳ ವ್ಯವಸ್ಥೆ, ಕ್ರೇನ್‌ಗಳ ವ್ಯವಸ್ಥೆಗಳನ್ನು ಕೂಡ ಸಿದ್ದಪಡಿಸಿರಬೇಕು. ಜೊತೆಗೆ ಪೋಲಿಸ್ ಬಂದೋಬಸ್ತ್ ಮೂಲಕ ಸೂಕ್ತ ಏರ್ಪಾಡುಗಳನ್ನು ಮಾಡಿಕೊಳ್ಳಬೇಕು‌‌. ವಿಸರ್ಜನಾ ಮೆರವಣಿಗೆಯ ವೇಳೆ ಪಟಾಕಿ, ಸಿಡಿ ಮದ್ದು ಸಿಡಿಸುವುದು ಹಾಗೂ ನಾಗರಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದ್ದು, ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆಯನ್ನು ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಿದರು.

Ganesh Chaturthi 2023: BBMP Chief Commissioner Tushar Giri Nath appeals to worship with eco-friendly Ganesha idols

ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್/ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು ಸಾರ್ವಜನಿಕರು ಸಹ ಸಹಕರಿಸಲು ಕೋರಿದೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕೆಂದು ಹಾಗೂ ಬಣ್ಣದ/ಪಿಒಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಲ್ಲಿಸಿ ಪರಿಸರ ಸ್ನೇಹಿ ಮೂರ್ತಿಗಳನ್ನಿಟ್ಟು ಪೂಜಿಸಬೇಕೆಂದು ಸಾರ್ವಜನಿಕರಲ್ಲಿ ಮುಖ್ಯ ಆಯುಕ್ತರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಬಿಬಿಎಂಪಿಯ ಎಲ್ಲಾ ವಿಶೇಷ/ವಲಯ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಉಪ ಆಯುಕ್ತರು(ಆಡಳಿತ), ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Bengaluru Airport: ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ‘ನಾನು ಟೆರರಿಸ್ಟ್’ ಎಂಬ ವಾಟ್ಸ್ಯಾಪ್‌ ಸಂದೇಶ
Next: ಸಂಸತ್ ಸದಸ್ಯತ್ವ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.