ಬೆಂಗಳೂರು:
ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಛೇರಿಯ ಮುಂಭಾಗದ ಉದ್ಯಾನದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
ಇದೇ ವೇಳೆ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷ್ಮೀದೇವಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.

ನಾಡಪ್ರಭು ಕೆಂಪೇಗೌಡರ 514ನೇ ಜನ್ಮ ಜಯಂತಿಯ ಪ್ರಯುಕ್ತ ಪಾಲಿಕೆಯ ಕೇಂದ್ರ ಕಚೇರಿ ಎದುರಿಗಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.#KempegowdaJayanti @CMofKarnataka @siddaramaiah @DKShivakumar @KarnatakaVarthe pic.twitter.com/2Vr7vYAQnn
— Tushar Giri Nath IAS (@BBMPCOMM) June 27, 2023
ಈ ವೇಳೆ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.