ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು:
ಒಂದು ದೇಶ,ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಅವರು ಇಂದು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿ ಮಾತನಾ ಡಿದ ಅವರು,ಭಾರತ ಸರ್ಕಾರವು ಇಂಧನ ಪೂರೈಕೆಗೆ ಒಂದು ಸಮಗ್ರ ಯೋಜನೆಯನ್ನು ರೂಪಿಸಿದ್ದು,ಪರಿಸರ ಸ್ನೇಹಿ ಇಂಧನ ಬಳಕೆಗೆ ಆದ್ಯತೆ ನೀಡುತ್ತಿದೆ.ಆ ಮೂಲಕ ಜನ ಸ್ನೇಹಿ ಹಾಗೂ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಶ್ರಮಿಸುತ್ತಿದೆ ಎಂದು ಅವರು ಪ್ರತಿಪಾದಿಸಿದರು.

1987 ರಿಂದ 2014ರ ಅವಧಿಯಲ್ಲಿ ದೇಶದಲ್ಲಿ 15ಸಾವಿರ ಕಿ.ಮೀ.ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸಲಾ ಗಿತ್ತು.ಆದರೆ ಕಳೆದ ಆರು ವರ್ಷಗಳ ಅವಧಿಯಲ್ಲಿ 16ಸಾವಿರ ಕಿ.ಮೀ.ನಷ್ಟು ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸುವ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಿದ್ದು,ಮುಂದಿನ ನಾಲ್ಕಾರು ವರ್ಷಗಳಲ್ಲಿ ಪೂರ್ಣಗೊಳ್ಳು ವ ನಿರೀಕ್ಷೆ ಇದೆ.ಸಾರಿಗೆ ಸಂಪರ್ಕ ಹಾಗೂ ಪರಿಸರ ಸ್ನೇಹಿ ಇಂಧನ ವಲಯದಲ್ಲಿ ಪ್ರಗತಿ ಸಾಧಿಸಿದ ದೇಶಗಳು ಅಭಿವೃದ್ಧಿ ನಕ್ಷೆಯಲ್ಲಿ ಮುಂಚೂಣಿಯಲ್ಲಿರುತ್ತವೆ.ಭಾರತವೂ ಅಭಿವೃದ್ಧಿಯ ಮುಂಚೂಣಿಯಲ್ಲಿರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
Dedicating the Kochi – Mangaluru Natural Gas Pipeline to the nation. #UrjaAatmanirbharta https://t.co/u8x0hQGUcR
— Narendra Modi (@narendramodi) January 5, 2021
ಒಂದು ದೇಶ ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯು ಪೂರ್ಣಪ್ರಮಾಣದಲ್ಲಿ ಸಾಕಾರಗೊಂಡಾಗ ರಸಗೊಬ್ಬರ, ರಾಸಾಯನಿಕ,ಪೆಟ್ರೋಲಿಯಂ ಮತ್ತು ಇಂಧನ ವಲಯಗಳಿಗೆ ಹೆಚ್ಚಿನ ಲಾಭವಾಗಲಿದೆ.ಬಡ,ಮಧ್ಯ ಮ ವರ್ಗದ ಜನರು ಮತ್ತು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗಲಿದೆ.ಅಲ್ಲದೆ ಸಾವಿರಾರು ಕೋಟಿ ವಿದೇಶಿ ವಿನಿಮಯ ಮೊತ್ತ ಉಳಿತಾಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ದೇಶದಲ್ಲಿ ನೈಸರ್ಗಿಕ ಅನಿಲ ಬಳಕೆ ಶೇ 6.3ರಷ್ಟಿದ್ದು,2030ರ ವೇಳೆಗೆ ಇದನ್ನು ಶೇ.15ಕ್ಕೆ ಹೆಚ್ಚಿಸುವ ಗುರಿ ಹೊಂ ದಲಾಗಿದೆ.ಕೊಚ್ಚಿ-ಮಂಗಳೂರು ಪೈಪ್ ಲೈನ್ ನಿಂದ ಈ ಭಾಗದ ಕೈಗಾರಿಕೋದ್ಯಮಗಳಿಗೆ ಅನುಕೂಲವಾಗಲಿದೆ .ಜೊತೆಗೆ ವಾಹನಗಳಲ್ಲಿ ಸಿಎನ್ ಜಿ ಬಳಕೆಗೂ ಉತ್ತೇಜನ ದೊರೆಯಲಿದೆ.ಈ ವ್ಯಾಪ್ತಿಯಲ್ಲಿ ಸುಮಾರು 700 ಸಿಎ ನ್ ಜಿ ಸ್ಟೇಷನ್ ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು,ಕೊಚ್ಚಿ-ಮಂಗ ಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಯೋಜನೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೆಚ್ಚಿನ ಅನುಕೂ ಲವಾಗಲಿದೆ.ಈ ಭಾಗದಲ್ಲಿ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುವು ದು.ಅಲ್ಲದೆ,ವಾಣಿಜ್ಯ ಚಟುವಟಿಕೆಗಳಿಗೆ,ಉದ್ದಿಮೆಗಳಿಗೆ,ವಿಶೇಷವಾಗಿ ಎಂಸಿಎಫ್ ಹಾಗೂ ಎಂಆರ್ ಪಿಎಲ್ ಗಳಿ ಗೆ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಯೋಜನೆಯಿಂದ ರಾಜ್ಯದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಯ ಜೊತೆಗೆ ಅನಿಲ ಆಧಾರಿತ ಕೈಗಾರಿಕೆಗಳ ಮೂಲಕ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿದೆ. ರಾಜ್ಯದ ಸಮಸ್ತ ಜನತೆ ಪರವಾಗಿ ಪ್ರಧಾನಮಂತ್ರಿಗಳಿಗೆ ಮತ್ತು ಪೆಟ್ರೋಲಿಯಂ ಸಚಿವ ಶ್ರೀ @dpradhanbjp ರವರಿಗೆ ಧನ್ಯವಾದಗಳು. (2/2) #UrjaAatmanirbharta @PMOIndia
— B.S. Yediyurappa (@BSYBJP) January 5, 2021
ಧಾಬೋಲ್-ಬೆಂಗಳೂರು ಅನಿಲ್ ಪೈಪ್ ಲೈನ್ ಯೋಜನೆ ಈಗಾಗಲೇ ಕಾರ್ಯಗತವಾಗಿದ್ದು,ಬೆಂಗಳೂರು ನಗರ ವೊಂದರಲ್ಲೇ 25 ಸಾವಿರ ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುತ್ತಿದೆ.ಸುಮಾ ರು 2.8ಲ ಕ್ಷಕ್ಕೂ ಹೆಚ್ಚು ಜನರು ನೈಸರ್ಗಿಕ ಅನಿಲ ಸಂಪರ್ಕ ಕೋರಿ ನೋಂದಾಯಿಸಿಕೊಂಡಿದ್ದು,1.68 ಲಕ್ಷ ಮನೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ.ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ನೈಸ ರ್ಗಿಕ ಅನಿಲ ಬಳಕೆ ಪ್ರಮಾಣ ಹೆಚ್ಚಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.ಹಲವು ಸವಾಲುಗಳ ನಡುವೆಯೂ ಯೋಜನೆಯನ್ನು ಪೂರ್ಣಗೊಳಿಸಿದ ಪ್ರಧಾನ ಮಂತ್ರಿಯವರ ದೃಢಸಂಕಲ್ಪವನ್ನು ಮುಖ್ಯಮಂ ತ್ರಿಗಳು ಶ್ಲಾಘಿಸಿದರು.
ಸಮಾರಂಭದಲ್ಲಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು,ಹಲವು ಅಡೆತಡೆಗಳ ನಡುವೆಯೂ ಪೂರ್ಣಗೊಂಡ ಈ ಯೋಜನೆಯಿಂದ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
Another promise kept; the Government has been able to realize the Kochi-Mangaluru GAIL Pipeline.
— Pinarayi Vijayan (@vijayanpinarayi) January 5, 2021
Today, @PMOIndia Shri. @narendramodi ji dedicated it to the nation.
The success of the project is a manifestation of the change in the way business is conducted in the State.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕೇಂದ್ರ ಪೆಟ್ರೋಲಿಯಂ ಮತ್ತು ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿ,ಭಾರತ ಸರ್ಕಾರವು ದೇಶದಲ್ಲಿ ನೈಸರ್ಗಿಕ ಅನಿಲ ಪೈಪ್ ಲೈನ್ ವ್ಯಾಪ್ತಿಯನ್ನು ದ್ವಿಗುಣ ಗೊಳಿಸುವ ಮೂಲಕ,ನೈಸರ್ಗಿಕ ಅನಿಲ ಬಳಕೆಯನ್ನು ಶೇ. 6.3 ರಿಂದ ಶೇ. 15ಕ್ಕೆ ಹೆಚ್ಚಿಸಲು ಉದ್ದೇಶಿಸಿದೆ ಎಂದು ನುಡಿ ದರು.
ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಕಲ್ಲಿ ದ್ದಲು ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವ ವಿ.ಮುರಳೀ ಧರನ್ ಮ ತ್ತು ಇತರ ಗಣ್ಯರು ಈ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. UNI