ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ
ಬೆಂಗಳೂರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ಬಿಬಿಎಂಪಿ ಆಡಳಿತಾಧಿಕಾರಿಯಾಗಿದ್ದ ಗೌರವ್ ಗುಪ್ತಾ ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ನಡುವೆ, ಹಾಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಕೂಡ ಅವರು ಈ ಇಲಾಖೆಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು.
ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ, ಆಯುಕ್ತರ ಹುದ್ದೆ ಮುಖ್ಯ ಆಯುಕ್ತರ ಹುದ್ದೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಆದೇಶ ಗುರುವಾರದಿಂದ ಜಾರಿಗೆ ಬರಲಿದೆ.
ನಗರಾಭಿವೃದ್ಧಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಇದನ್ನೂ ಓದಿ: ಗೌರವ್ ಗುಪ್ತಾ ನೂತನ ಬಿಬಿಎಂಪಿ ಮುಖ್ಯ ಆಯುಕ್ತ, ರಾಕೇಶ್ ಸಿಂಗ್ ಆಡಳಿತಗಾರರಾಗಿ ನೇಮಕ https://kannada.thebengalurulive.com/gaurav-gupta-to-be-new-bbmp-chief-commissioner-rakesh-singh-to-take-over-as-administrator/