Gauri Lankesh murder case – 11th accused gets bail | ಗೌರಿ ಲಂಕೇಶ್ ಹತ್ಯೆ ಪ್ರಕರಣ- 11ನೇ ಆರೋಪಿಗೆ ಜಾಮೀನು ಮಂಜೂರು
ಬೆಂಗಳೂರು:
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
1 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರು ಶ್ಯೂರಿಟಿ ಒದಗಿಸಬೇಕು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದೆಂದು ಹೈಕೋರ್ಟ್ ಷರತ್ತು ವಿಧಿಸಿದೆ. ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಈತನಾಗಿದ್ದಾನೆ.
ಪ್ರಕರಣ ಸಂಬಂಧ ಇನ್ನೂ 400 ಸಾಕ್ಷಿಗಳ ವಿಚಾರಣೆ ಬಾಕಿಯಿರುವ ಹಿನ್ನೆಲೆ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
