ಮುಖ್ಯಮಂತ್ರಿಗಳ ಕಾರ್ಯಕ್ರಮ ಅನುಷ್ಠಾನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುನೀಶ್ ಮೌದ್ಗಿಲ್ಗೆ ಹೆಚ್ಚುವರಿ ಹೊಣೆ
ಬೆಂಗಳೂರು, ಜೂನ್ 7: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವಿಶೇಷ ಆಯುಕ್ತರಾಗಿರುವ ಮುನೀಶ್ ಮೌದ್ಗಿಲ್ (1998 ಬ್ಯಾಚ್) ಅವರಿಗೆ ಮುಖ್ಯಮಂತ್ರಿಗಳ ಕಾರ್ಯಕ್ರಮ ಮತ್ತು ಯೋಜನೆಗಳ ಅನುಷ್ಠಾನ ವಿಭಾಗದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಪ್ರಸ್ತುತ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಆಡಳಿತ, ಕಂದಾಯ ಮತ್ತು ಐಟಿ ವಿಭಾಗಗಳ ವಿಶೇಷ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ತಮ್ಮ ಹಾಲಿ ಹುದ್ದೆಯ ಜೊತೆಗೆ ಹೊಸ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ರಾಜ್ಯ ಸರ್ಕಾರ ಈ ಹುದ್ದೆಯನ್ನು ಪ್ರಧಾನ ಕಾರ್ಯದರ್ಶಿ ದರ್ಜೆಯ ಸಮಾನ ಹುದ್ದೆಯಾಗಿ ಘೋಷಿಸಿದೆ.
