ನಾಲ್ಕನೇ ಬಾರಿ ಆಯ್ಕೆಗೆ ನಾಮಪತ್ರ ಸಲ್ಲಿಕೆ; ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ; ಧರ್ಮಪತ್ನಿ ಹಾಗೂ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ
ಬೆಂಗಳೂರು:
ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳು ಕೈ ಹಿಡಿಯಲಿದ್ದು, ಸುಮಾರು 75 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ನಾಲ್ಕನೇ ಬಾರಿಗೆ ಬೊಮ್ಮನಹಳ್ಳಿ ಕ್ಷೇತ್ರದ ಜನರು ನನಗೆ ಆಶೀರ್ವದಿಸಲಿದ್ದಾರೆ ಎಂದು ಬಿಜೆಪಿ ಮುಖ್ಯ ಸಚೇತಕರು ಹಾಗೂ ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ಹೇಳೀದರು.
ಇಂದು ಬೊಮ್ಮನಹಳ್ಳೀ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ನಾಮಪತ್ರ ಸಲ್ಲಿಸಿ ಮಾತನಾಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿಜಿ ಅವರ ನೇತೃತ್ವದ ಸರಕಾರ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಡಬಲ್ ಫೋರ್ಸ್‌ನಲ್ಲಿ ಅಭಿವೃದ್ದಿ ಕಾರ್ಯವನ್ನು ಮಾಡಿವೆ. ಸತತ ಮೂರು ಬಾರಿ ಆಯ್ಕೆಯಾಗುವ ಮೂಲಕ ನನ್ನ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ಇವುಗಳ ಆಧಾರದ ಮೇಲೆ ಮತದಾರರು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಅವರು ಹೊಂಗಸಂದ್ರದ ಶ್ರೀ ವೀರಾಂಜನೇಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಬಿಬಿಎಂಪಿ ಮಾಜಿ ಉಪಮೇಯರ್ ರಾಮ್ ಮೋಹನ್ ರಾಜ್ ಹಾಗೂ ಇನ್ನಿತರ ಪ್ರಮುಖ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದರು.