Home High Court/ಹೈಕೋರ್ಟ್ ಕನ್ನಡ ಕಲಿಯಬೇಕು ಎಂದು ರಾಜ್ಯ ಸರ್ಕಾರ ಒತ್ತಿ ಹೇಳಲಾಗದು: ಕರ್ನಾಟಕ ಹೈಕೋರ್ಟ್

ಕನ್ನಡ ಕಲಿಯಬೇಕು ಎಂದು ರಾಜ್ಯ ಸರ್ಕಾರ ಒತ್ತಿ ಹೇಳಲಾಗದು: ಕರ್ನಾಟಕ ಹೈಕೋರ್ಟ್

21
0
Karnataka High Court

ಬೆಂಗಳೂರು:

“ಪದವಿ ಶಿಕ್ಷಣದ ಹಂತದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿಯನ್ನು ಮರುಪರಿಶೀಲಿಸಬೇಕು. ಕನ್ನಡ ಕಲಿಯಬೇಕು ಎಂದು ಸರ್ಕಾರ ಒತ್ತಿ ಹೇಳಲಾಗದು. ನಿಮ್ಮ ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ರಾಜ್ಯ ಸರ್ಕಾರವು ಪದವಿ ಹಂತದಲ್ಲಿ ಕನ್ನಡ ಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ಆರಂಭಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು “ಆರಂಭಿಕರಿಗೆ ಕಾರ್ಯನಿರ್ವಹಣೆಗೆ ಅಗತ್ಯವಾದ ಕನ್ನಡವನ್ನು ಕಲಿಸಲಾಗುತ್ತದೆ ವಿನಾ ಸಾಂಪ್ರದಾಯಿಕ ರೀತಿಯಲ್ಲಿ ಕ್ರಮಬದ್ಧವಾಗಿ ಕನ್ನಡ ಬೋಧಿಸುವುದಿಲ್ಲ. ಇಡೀ ಪದವಿ ಅವಧಿಯ ಆರು ತಿಂಗಳು ಮಾತ್ರ ಕನ್ನಡ ಬೋಧಿಸಲಾಗುತ್ತದೆ. ಇದನ್ನು ನಾವು ಇನ್ನಷ್ಟೇ ಜಾರಿ ಮಾಡಬೇಕಿರುವುದರಿಂದ ತಡೆಯಾಜ್ಞೆ ಪ್ರಶ್ನೆ ಉದ್ಭವಿಸುವುದಿಲ್ಲ. ಕರ್ನಾಟಕದಲ್ಲೇ ಇದ್ದು, ಇಲ್ಲೇ ಉದ್ಯೋಗ ಪಡೆಯಲು ಬಯಸಿದರೆ ಇದರಿಂದ ಅನುಕೂಲವಾಗುತ್ತದೆ. ರಾಜ್ಯ ಸರ್ಕಾರವು ತನ್ನ ನೀತಿಯ ಭಾಗವಾಗಿ ಕನ್ನಡ ಕಲಿಯುವುದನ್ನು ಕಡ್ಡಾಯಗೊಳಿಸಿದೆ” ಎಂದು ಸಮರ್ಥಿಸಿದರು.

LEAVE A REPLY

Please enter your comment!
Please enter your name here