Home ಬೆಂಗಳೂರು ನಗರ ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

ಸಾಮಾನ್ಯ ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

45
0
Government is flirting with lives of common people: DK Shivakumar
Advertisement
bengaluru

ಬೆಂಗಳೂರು:

‘ಕೋವಿಡ್ 2ನೇ ಅಲೆಯಲ್ಲಿ ಆಗಿರುವ ನಷ್ಟಕ್ಕೆ ರೈತರಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಸಿಕ್ಕಿಲ್ಲ. ಬೆಳೆಗೆ ಬೆಲೆ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಸರ್ಕಾರ ಇದ್ಯಾವುದರ ಬಗ್ಗೆಯೂ ಚಿಂತಿಸದೇ ಜನರ ಜೀವನದ ಜತೆ ಚೆಲ್ಲಾಟವಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಹೊಸ ಸರ್ಕಾರ ಬಂದಿದೆ, ಜನರ ರಕ್ಷಣೆ ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ. ಹಾರ-ತುರಾಯಿ ಹಾಕಿಸಿಕೊಳ್ಳುವವರಿಗೆ ನಾನು ಬೇಡ ಎನ್ನುವುದಿಲ್ಲ. ಕೋವಿಡ್ ಸೋಂಕು ನಿಯಂತ್ರಿಸಬೇಕು. ಎಲ್ಲರೂ ತಮ್ಮ ಕ್ಷೇತ್ರಗಳಿಗೆ ಹೋಗಿ ಎಂದು ಸಿಎಂ ಸೂಚಿಸಿದ್ದಾರೆ. ಈ ವಿಚಾರವಾಗಿ ನಾನು ಇಲ್ಲಿ ಮಾತನಾಡುವುದಿಲ್ಲ. ಎಲ್ಲಿ ಹೋದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ, ಅವರು ಬೆಳೆದ ಟಮೋಟೋ, ತರಕಾರಿಗಳಿಗೆ ಬೆಲೆ ಸಿಗದೇ ಬಿಸಾಕುತ್ತಿದ್ದಾರೆ. ನೂತನ ಮುಖ್ಯಮಂತ್ರಿಗಳು ಬಂದಿದ್ದಾರೆ, ಅವರಾದರೂ ರೈತರು, ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವವರನ್ನು ಉಳಿಸುತ್ತಾರಾ ನೋಡಬೇಕು.

bengaluru bengaluru

ಜಗದೀಶ್ ಶೆಟ್ಟರ್ ಅವರು ಮಂತ್ರಿಯಾಗಿದ್ದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚಿಂತನೆ ಮಾಡಬೇಕಿದೆ, ಅಧಿವೇಶನ ಕರೆಯುತ್ತೇವೆ ಎಂದಿದ್ದರು. ಈಗ ಉತ್ತರ ಕರ್ನಾಟಕ ಭಾಗದ ಮುಖ್ಯಮಂತ್ರಿಗಳೇ ಇದ್ದಾರೆ. ಯಾವಾಗ ಕರೆಯುತ್ತಾರೋ ನೋಡೋಣ. ತರಾತುರಿಯಲ್ಲಿ ನಾನು ಮಾತನಾಡುವುದಿಲ್ಲ.

ಜಮೀರ್ ಅವರ ಜತೆ ನನ್ನ ಅನುಭವವನ್ನು ಖಾಸಗಿಯಾಗಿ ಹಂಚಿಕೊಳ್ಳಲು ಸಿದ್ಧ:

ಇನ್ನು ನಮ್ಮ ನಾಯಕರ ಮನೆ ಮೇಲೆ ಇಡಿ ದಾಳಿ ಬಗ್ಗೆ ನನಗೆ ಇರುವ ಕಾನೂನು ಅರಿವಿನ ವಿಚಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ನಾನು ಈ ಬಗ್ಗೆ ವೈಯಕ್ತಿಯವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಖಾಸಗಿಯಾಗಿ ನನ್ನ ಅನುಭವವನ್ನು ಅವರೊಟ್ಟಿಗೆ ಹಂಚಿಕೊಳ್ಳಲು ಸಿದ್ಧನಿದ್ದೇನೆ. ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡುವುದಿಲ್ಲ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕುರಿತಾಗಿ ಜಮೀರ್ ಅವರು ಮಾಡಿರುವ ಆರೋಪಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅವರು ಇವರ ಬಗ್ಗೆ ಹೇಳಿದರೆ, ಇವರು ಅವರ ಬಗ್ಗೆ ಮಾತನಾಡಿದರೆ, ನೀವು ಅವರನ್ನೇ ಕೇಳಬೇಕು. ಆ ವಿಚಾರವಾಗಿ ನನ್ನನ್ನು ಯಾಕೆ ಪ್ರಶ್ನಿಸುತ್ತಿದ್ದೀರಿ?’


bengaluru

LEAVE A REPLY

Please enter your comment!
Please enter your name here