Home ಆರೋಗ್ಯ ನಕಲಿ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ: ಆರೋಗ್ಯ ಸಚಿವ...

ನಕಲಿ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

20
0

ಬೆಂಗಳೂರು: ರಾಜ್ಯದಲ್ಲಿ ನಕಲಿ ಡಾಕ್ಟರ್ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾ‌ನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣ ಕಮಕನೂರು ಅವರು, ಕಲಬುರಗಿಯಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಾಗಿದೆ. ನೂರಾರು ಜನ ನಕಲಿ ವೈದ್ಯರ ಚಿಕಿತ್ಸೆಯಿಂದ ಸತ್ತು ಹೋಗಿದ್ದಾರೆ. ಕಲಬುರಗಿ ಡಿಹೆಚ್‌ಒ ಶಾಮೀಲಾಗಿದ್ದಾರೆ. ಹೀಗಾಗಿ ಕೂಡಲೇ ಸಮಿತಿ ರಚನೆ ಮಾಡಿ ನಕಲಿ ವೈದ್ಯರ ಪತ್ತೆ ಹಚ್ಚಿ ಶಿಕ್ಷೆ ಕೊಡಿ ಎಂದು ಒತ್ತಾಯಿಸಿದರು.

ಈ ಪ್ರಶ್ನೆಗೆ ದಿನೇಶ್ ಗುಂಡೂರಾವ್ ಉತ್ತರ ನೀಡಿ, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಿದೆ. ನಕಲಿ ವೈದ್ಯರನ್ನ ಹುಡುಕಿ ಅವರ ಕ್ಲಿನಿಕ್‌ ಬಂದ್‌ ಮಾಡಿಸುವ ಕೆಲಸ‌ ಮತ್ತು ಅವರ ವಿರುದ್ದ ಕ್ರಮ ಕೈಗೊಳ್ಳುವ ಕೆಲಸ ಮಾಡಿದ್ದೇವೆ. ಇದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದರು.

ಇಂಗ್ಲಿಷ್ ‌ಔಷಧಿ ನೀಡುವ ಕ್ಲಿನಿಕ್‌ನವರು ನೀಲಿ ಬೋರ್ಡ್ ಹಾಕಲು ಕಡ್ಡಾಯವಾಗಿ ಸೂಚನೆ ನೀಡಲಾಗಿದೆ. ನಕಲಿ ವೈದ್ಯರಿಗೆ 3 ವರ್ಷ ಜೈಲು ಶಿಕ್ಷೆಯೂ ನಿಯಮದಲ್ಲಿ ಇದೆ.1 ಲಕ್ಷ ರೂ. ದಂಡ ವಿಧಿಸುವ ನಿಯಮ ‌ಇದೆ. ನಕಲಿ ವೈದ್ಯರ ಬಂಧನ ಮಾಡಿದಾಗ ಅವರ ಪರವಾಗಿ ರಾಜಕಾರಣಿಗಳೇ ಅವರನ್ನ ಬಿಡಿಸಿ ಬರುತ್ತಾರೆ. ನಕಲಿ ವೈದ್ಯರ ಹಾವಳಿ ಕಡಿವಾಣಕ್ಕೆ ಮತ್ತಷ್ಟು ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here