Home High Court/ಹೈಕೋರ್ಟ್ ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಿ

ಗ್ರಾಮ ಪಂಚಾಯಿತಿ ಚುನಾವಣೆಗೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಿ

41
0
Karnataka High Court

ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು:

ರಾಜ್ಯದ 6,000 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಮೂರು ವಾರಗಳೊಳಗೆ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆದೇಶ ಕೋರಿ ವಿಧಾನ ಪರಿಷತ್‌ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ವಿಶೇಷ ಸಂದರ್ಭಗಳಲ್ಲಿ ಚುನಾವಣೆಗಳನ್ನು ಮುಂದೂಡುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ಹೊಂದಿದೆ. ಆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here