Home Uncategorized ಗೃಹ ಜ್ಯೋತಿ: ಕಳೆದ ಎಂಟು ದಿನಗಳಲ್ಲಿ 51 ಲಕ್ಷ ನೋಂದಣಿ

ಗೃಹ ಜ್ಯೋತಿ: ಕಳೆದ ಎಂಟು ದಿನಗಳಲ್ಲಿ 51 ಲಕ್ಷ ನೋಂದಣಿ

58
0
Gruha Jyothi: 51 lakh registered in last eight days
Gruha Jyothi: 51 lakh registered in last eight days

ಬೆಂಗಳೂರು:

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಗೆ, ಜೂನ್ 18 ರಿಂದ ಆರಂಭವಾದ ನೋಂದಣಿ ಪ್ರಕ್ರಿಯೆ ಶರವೇಗ ಪಡೆದುಕೊಂಡಿದ್ದು, ಇದೀಗ 50 ಲಕ್ಷ ನೋಂದಣಿಯ ಗಡಿಯನ್ನು ದಾಟಿದೆ. ಇಂದು (25.06.2023), ಭಾನುವಾರ ಸಂಜೆ 4 ಗಂಟೆಯವರೆಗೆ 51,17,693 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ವಿಧಾನವನ್ನು ಅತ್ಯಂತ ಸುಲಭಗೊಳಿಸಿರುವುದರಿಂದ, ಗ್ರಾಹಕರು ಅತ್ಯಂತ ಉತ್ಸುಕತೆಯನ್ನು ತೋರುತ್ತಿದ್ದು, ಪ್ರತಿದಿನವೂ ಲಕ್ಷದೋಪಾದಿಯಲ್ಲಿ ನೋಂದಣಿಯ ಪ್ರಮಾಣ ಹೆಚ್ಚುತ್ತಿದೆ.

Also Read: Gruha Jyothi Scheme Registrations cross 51 lakh

ಗೃಹ ಜ್ಯೋತಿ ಯೋಜನೆಗೆ ಯಾವುದೇ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಸಂಪೂರ್ಣ ಉಚಿತ. ಗ್ರಾಹಕರು ಮೇಲ್ಕಂಡ ವೆಬ್’ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್’ಸೈಟ್ ಬಳಸದೇ ಇರುವುದು ಸೂಕ್ತ. ಇದಲ್ಲದೇ ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಛೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಇ – ಆಡಳಿತ ಇಲಾಖೆ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುತ್ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆಗೆ ವೇಗ ದೊರೆತಿದೆ. ಗೃಹ ಜ್ಯೋತಿ ಯೋಜನೆಗೆ ನೋಂದಣಿ ಆರಂಭವಾದಾಗಿನಿಂದ ಪ್ರತಿದಿನದ ಎಸ್ಕಾಂವಾರು ನೋಂದಣಿಯ ವಿವರ ಇಲ್ಲಿದೆ.

image

ಈ ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು ಇಂಧನ ಇಲಾಖೆಯ ಅಧಿಕೃತ ವೆಬ್‌ಸೈಟ್ https://energy.karnataka.gov.in ಗೆ ಭೇಟಿ ನೀಡಿ ಅಥವಾ 24×7 ಸಹಾಯವಾಣಿ 1912 ಕ್ಕೆ ಕರೆಮಾಡಬಹುದಾಗಿದೆ.

LEAVE A REPLY

Please enter your comment!
Please enter your name here