Home ರಾಜಕೀಯ ಗೃಹ ಜ್ಯೋತಿ : ಮೊದಲ ದಿನ 55000 ಗ್ರಾಹಕರ ನೋಂದಣಿ

ಗೃಹ ಜ್ಯೋತಿ : ಮೊದಲ ದಿನ 55000 ಗ್ರಾಹಕರ ನೋಂದಣಿ

93
0
Gruha Jyothi : 55000 customer registration on first day
Gruha Jyothi : 55000 customer registration on first day

ಬೆಂಗಳೂರು:

ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಜ್ಯೋತಿ ಯೋಜನೆಯ ನೋಂದಣಿಯು ಸೇವಾ ಸಿಂಧು ಪೋರ್ಟಲ್‌ ನಲ್ಲಿ ಭಾನುವಾರ (ಜೂನ್‌ 18) ಆರಂಭಗೊಂಡಿತು.

ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ಪ್ರಕ್ರೀಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿತು, ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಮಾಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇ ಆಡಳಿತ ಇಲಾಖೆ ನೋಂದಣಿ ಪ್ರಕ್ರೀಯೆನ್ನು ಸರಳೀಕರಣಗೊಳಿಸಿದ್ದು, ಗ್ರಾಹಕರು ವಿದ್ಯುತ್ ಬಿಲ್ ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಭಾನುವಾರ ರಜಾ ದಿನವಾದರೂ, ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ಯೋಜನೆ ನೋಂದಣಿಯ ಮೇಲುಸ್ತುವಾರಿವಹಿಸಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಂಡರು.

ಗ್ರಾಹಕರು ಯೋಜನೆ ನೋಂದಣಿಗೆ ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಮೊಬೈಲ್, ಲ್ಯಾಪ್ ಟಾಪ್ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಿ, ಇಲ್ಲವೆ 24×7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಿ.

LEAVE A REPLY

Please enter your comment!
Please enter your name here