ಬೆಂಗಳೂರು:
ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000/- ಗಳನ್ನು ನೀಡುವ
“ಗೃಹಲಕ್ಷ್ಮಿ ಯೋಜನೆ”ಗೆ ಪಾಲಿಕೆಯ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್)ದಲ್ಲಿ ಏರ್ಪಡಿಸಿದ್ದ ಮುಖ್ಯ ಕಾರ್ಯಕ್ರಮಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಸುಮಾರು 6,16,480 ಜನ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಹೆಸರನ್ನು ನೊಂದಾಯಿಸಿಕೊಂಡಿರುತ್ತಾರೆ.
ಈ ವೇಳೆ ವಿಶೇಷ ಆಯುಕ್ತರುಗಳಾದ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಆರ್.ಎಲ್ ದೀಪಕ್, ದಕ್ಷಿಣ ವಲಯ ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ್, ಗೃಹಲಕ್ಷ್ಮಿ ಯೋಜನೆಯ ನೋಡಲ್ ಅಧಿಕಾರಿಯಾದ ಲಕ್ಷ್ಮಿದೇವಿ, ಗೃಹಲಕ್ಷ್ಮಿ ಯೋಜನೆ ಸೌಲಭ್ಯದ ಫಲಾನುಭವಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.