Home ನವ ದೆಹಲಿ ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

42
0

ದೇಶಕ್ಕೆ ಮನಮೋಹನ್ ಅವರು ಕೊಟ್ಟ ಕೊಡುಗೆ ಚಿರಸ್ಮರಣೀಯ ಎಂದ ಕೇಂದ್ರ ಸಚಿವರು

ನವದೆಹಲಿಗೆ ತೆರಳಿ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ1

ನವ ದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು.

ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಶುಕ್ರವಾರ ಬೆಳ ಬೆಳಗ್ಗೆಯೇ ನವದೆಹಲಿಗೆ ವಾಪಸ್ಸಾದರು.

ವಿಮಾನ ನಿಲ್ದಾಣದಿಂದ ನೇರವಾಗಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದ ಸಚಿವರು; ಅಗಲಿದ ಮಾಜಿ ಪ್ರಧಾನಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ದೇಶಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದರು.

ದೇಶದ ಅಭಿವೃದ್ಧಿಗೆ ಮನಮೋಹನ್ ಸಿಂಗ್ ಅವರು ಮಹಾನ್ ಕೊಡುಗೆ ನೀಡಿದ್ದಾರೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಆರ್ಥಿಕ ಅಪಾಯದಿಂದ ಪಾರು ಮಾಡಿದ್ದರು. ಆರ್ಥಿಕ ಸಚಿವರಾಗಿ, ಪ್ರಧಾನಿಯಾಗಿ ಹಾಗೂ ಹಣಕಾಸು ತಜ್ಞರಾಗಿ ಅವರು ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಕೇಂದ್ರ ಸಚಿವರು ಸ್ಮರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮನಮೋಹನ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ತಮ್ಮ ಸಂತಾಪಗಳನ್ನು ತಿಳಿಸಿದರು.

LEAVE A REPLY

Please enter your comment!
Please enter your name here