Home Uncategorized Haripriya: ಹಸೆಮಣೆ ಏರಲು ಸಜ್ಜಾದ ಹರಿಪ್ರಿಯಾ-ವಸಿಷ್ಠ ಸಿಂಹ? ಮೂಗು ಚುಚ್ಚಿದ ವಿಡಿಯೋ ವೈರಲ್​ ಬಳಿಕ ಗುಸುಗುಸು

Haripriya: ಹಸೆಮಣೆ ಏರಲು ಸಜ್ಜಾದ ಹರಿಪ್ರಿಯಾ-ವಸಿಷ್ಠ ಸಿಂಹ? ಮೂಗು ಚುಚ್ಚಿದ ವಿಡಿಯೋ ವೈರಲ್​ ಬಳಿಕ ಗುಸುಗುಸು

37
0

ನಟಿ ಹರಿಪ್ರಿಯಾ (Hariprriya) ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಖ್ಯಾತ ನಟ ವಸಿಷ್ಠ ಸಿಂಹ ಜೊತೆ ಅವರು ದಾಂಪತ್ಯ (Haripriya Vasishta Simha Wedding) ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಸಾಕ್ಷಿ ಒದಗಿಸುವಂತಹ ವಿಡಿಯೋ ಕೂಡ ವೈರಲ್​ ಆಗಿದೆ. ಕೆಲವೇ ದಿನಗಳ ಹಿಂದೆ ಹರಿಪ್ರಿಯಾ ಅವರು ಮೂಗು ಚುಚ್ಚಿಸಿಕೊಂಡ ವಿಡಿಯೋ ಹಂಚಿಕೊಂಡಿದ್ದರು. ಅದರಲ್ಲಿ ಅವರ ಪಕ್ಕ ನಿಂತಿದ್ದ ವ್ಯಕ್ತಿ ವಸಿಷ್ಠ ಸಿಂಹ (Vasishta Simha) ಎಂದು ಹೇಳಲಾಗುತ್ತಿದೆ. ಆದರೆ ಆ ವಿಡಿಯೋದಲ್ಲಿ ವಸಿಷ್ಠ ಅವರ ಮುಖ ಕಾಣಿಸಿಲ್ಲ. ಈ ಜೋಡಿಯ ಇನ್ನಿತರ ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್​ ಎಂದು ಕರೆದುಕೊಂಡಿದ್ದಾರೆ. ಈ ಬಗ್ಗೆ ಶೀಘ್ರವೇ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಅಧಿಕೃತವಾಗಿ ಹೇಳಿಕೆ ನೀಡಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಹಲವು ವರ್ಷಗಳಿಂದ ನಟಿ ಹರಿಪ್ರಿಯಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ಹಿಟ್​ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಮೂಗು ಚುಚ್ಚಿಸಿಕೊಂಡಿರಲಿಲ್ಲ. ಆದರೆ ಇತ್ತೀಚೆಗೆ ಮೂಗು ಚುಚ್ಚಲಾಯಿತು. ಆ ವಿಡಿಯೋ ನೋಡಿದ ಬಳಿಕ ಅನೇಕ ಅಭಿಮಾನಿಗಳಿಗೆ ಮದುವೆ ಬಗ್ಗೆ ಗುಮಾನಿ ಮೂಡಿತು. ‘ಇದು ಮದುವೆಯ ತಯಾರಿ’ ಎಂದು ಹಲವರು ಕಮೆಂಟ್​ ಮಾಡಿದ್ದರು. ಅದರ ಬೆನ್ನಲ್ಲೇ ಇನ್ನಷ್ಟು ಗುಸುಗುಸು ಕೇಳಿಬರಲು ಆರಂಭಿಸಿವೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರ ಎಂಗೇಜ್​ಮೆಂಟ್​ ಶೀಘ್ರದಲ್ಲೇ ನಡೆಯಲಿದೆ ಹಾಗೂ ಅದರ ಸಲುವಾಗಿ ಈಗಾಗಲೇ ಶಾಪಿಂಗ್​ ಕೂಡ ಮುಗಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

 

View this post on Instagram

 

A post shared by Hariprriya (@iamhariprriya)

2007ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹರಿಪ್ರಿಯಾ ಅವರು ಇಂದಿಗೂ ಚಾರ್ಮ್​ ಉಳಿಸಿಕೊಂಡಿದ್ದಾರೆ. ರಿಷಬ್​ ಶೆಟ್ಟಿ, ರಕ್ಷಿತ್​ ಶೆಟ್ಟಿ, ಶ್ರೀಮುರಳಿ ಮುಂತಾದ ಸ್ಟಾರ್​ ಹೀರೋಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ನಾಯಕಿ ಪ್ರಧಾನ ಸಿನಿಮಾಗಳನ್ನೂ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ಹಲವು ಚಿತ್ರಗಳು ಅವರ ಕೈಯಲ್ಲಿವೆ. ವಸಿಷ್ಠ ಸಿಂಹ ಕೂಡ ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ವಿಲನ್​ ಪಾತ್ರಗಳ ಮೂಲಕ ತಮ್ಮದೇ ಛಾಪು ಮೂಡಿಸಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

LEAVE A REPLY

Please enter your comment!
Please enter your name here