Home Uncategorized Haripriya Vasishta Simha Engagement: ಹರಿಪ್ರಿಯಾ-ವಸಿಷ್ಠ ಸಿಂಹ ನಿಶ್ಚಿತಾರ್ಥ; ಕೇವಲ ಆಪ್ತರ ಸಮ್ಮುಖದಲ್ಲಿ ನಡೆಯಿತು ಶುಭಕಾರ್ಯ

Haripriya Vasishta Simha Engagement: ಹರಿಪ್ರಿಯಾ-ವಸಿಷ್ಠ ಸಿಂಹ ನಿಶ್ಚಿತಾರ್ಥ; ಕೇವಲ ಆಪ್ತರ ಸಮ್ಮುಖದಲ್ಲಿ ನಡೆಯಿತು ಶುಭಕಾರ್ಯ

17
0

ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾದ ಹರಿಪ್ರಿಯಾ (Haripriya) ಹಾಗೂ ವಸಿಷ್ಠ ಸಿಂಹ (Vasishta Simha) ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಈ ಜೋಡಿಯ ಬಗ್ಗೆ ಗುಸುಗುಸು ಹಬ್ಬಿತ್ತು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಅದಕ್ಕೆ ಪೂರಕ ಎಂಬಂತೆ ಒಂದೆರಡು ಫೋಟೋಗಳು ಕೂಡ ವೈರಲ್​ ಆಗಿದ್ದವು. ಈಗ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಎಂಗೇಜ್​ಮೆಂಟ್​ (Vasishta Simha Haripriya Engagement) ಮಾಡಿಕೊಂಡಿದ್ದಾರೆ. ಹರಿಪ್ರಿಯಾ ಅವರ ನಿವಾಸದಲ್ಲಿ ಸಿಂಪಲ್​ ಆಗಿ ಈ ಶುಭಕಾರ್ಯ ನಡೆದಿದೆ. ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಳ್ಳಲಾಗಿದೆ. ಶೀಘ್ರದಲ್ಲೇ  ಹರಿಪ್ರಿಯಾ-ವಸಿಷ್ಠ ಸಿಂಹ ಸಪ್ತಪದಿ ತುಳಿಯಲಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

 

 

LEAVE A REPLY

Please enter your comment!
Please enter your name here