Home ಹಾಸನ ಇಂದಿನಿಂದ ಹಾಸನಾಂಬ ದರ್ಶನೋತ್ಸವ

ಇಂದಿನಿಂದ ಹಾಸನಾಂಬ ದರ್ಶನೋತ್ಸವ

9
0
Hasanamba temple

ಹಾಸನ: ಇಂದಿನಿಂದ ಹಾಸನಾಂಬ ದರ್ಶನೋತ್ಸವ ಸಿಗಲಿದ್ದು, ದೇವಿಯ ದರ್ಶನಕ್ಕೆ ಭಕ್ತಗಣ ಕಾತುರರಾಗಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ನಂತರ ದೇವಿಯ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ನ.3ರ ಬೆಳಿಗ್ಗೆವರೆಗೆ ದೇವಿಯ ದರ್ಶನೋತ್ಸವಕ್ಕೆ ಅವಕಾಶವಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ವರ್ಷಕ್ಕೊಮ್ಮೆ ದರ್ಶನ ನೀಡಲು ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ದರ್ಶನಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಮಳೆ-ಬಿಸಿಲಿನಿಂದ ಭಕ್ತರು ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ.

ಹಾಸನಾಂಬೆ ದೇವಾಲಯದ ಒಳ-ಹೊರಗೆ ವಿಶೇಷ ರೀತಿಯಲ್ಲಿ ಹೂವಿನ ಅಲಂಕಾರ ಮಾಡಲಾಗಿದೆ. ಹಾಸನಾಂಬೆಯ ಬಾಗಿಲ ಮುಂಭಾಗ ಕಲಶದ ರೀತಿಯ ಹೂವಿನ ಕುಂಡ ಎಲ್ಲರ ಗಮನ ಸೆಳೆಯುತ್ತಿದೆ. ಇದೇ ಮೊದಲ ಬಾರಿಗೆ ದೇವಾಲಯದ ಬಳಿಗೆ ಬರುವ ಗಣ್ಯಾತಿಗಣ್ಯರಿಗೆ ಪ್ರವೇಶಕ್ಕೆ ಹಾಗೂ ನಿರ್ಗಮನಕ್ಕೆ ಎರಡು ಮಾರ್ಗ ಮಾಡಲಾಗಿದೆ. ಹಾಗೆಯೇ ಲಡ್ಡು-ಪ್ರಸಾದ ವಿತರಣೆಗೆ 24 ಕೌಂಟರ್ ತೆರೆಯಲಾಗಿದೆ. ಹಾಸನ ನಗರವನ್ನು ದಸರಾ ಮಾದರಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇಂದಿನಿಂದ ನವೆಂಬರ್ 3ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here