ಹಾಸನ: ಹಾಸನಾಂಬ ಭಕ್ತಾದಿಗಳಿಗೆ ಗುಡ್ ನ್ಯೂಸ್ , ನಾಳೆಯಿಂದ ಹಾಸನಾಂಬ ದೇಗುಲ ಬಾಗಿಲು ಓಪನ್ ಆಗಲಿದ್ದು, 9 ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.