Home ಹಾಸನ Hassan: ಗೃಹ ಸಚಿವ ಆರಗ ಜ್ಞಾನೇಂದ್ರರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

Hassan: ಗೃಹ ಸಚಿವ ಆರಗ ಜ್ಞಾನೇಂದ್ರರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣ

24
0
Hassan district police
bengaluru

ಹಾಸನ:

ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ.

ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದ್ದು ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಎಂಬುವರು ಮೃತಪಟ್ಟಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬಂಕ್‌ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಅವರಿಗೆ ಕೆಎ 13 ಜಿ 1467 ಸಂಖ್ಯೆಯ ಪೊಲೀಸ್ ವಾಹನ ಡಿಕ್ಕಿಯಾಗಿದೆ.

ಬೈಕ್ ಸವಾರ ರಮೇಶ್ ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತನ ದೇಹವನ್ನು ರಮೇಶ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

LEAVE A REPLY

Please enter your comment!
Please enter your name here