
Haveri: Two killed, 35 injured as private bus overturns
ಹಾವೇರಿ:
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು ಸುಮಾರು 35 ಮಂದಿ ಗಾಯಗೊಂಡಿದ್ದಾರೆ.
ಬಸ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆಯಿತು. ಇದರಿಂದ ಬಸ್ ಚಾಲಕ ಸದಾನಂದ ಮೃತಪಟ್ಟಿದ್ದು ಪ್ರಯಾಣಿಕನ ಗುರುತು ಪತ್ತೆಯಾಗಿಲ್ಲ.
ಬಸ್ಸು ಬೆಂಗಳೂರಿನಿಂದ ಮೀರಜ್ ಗೆ ತೆರಳುತ್ತಿತ್ತು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.