ಹಾವೇರಿ: ಬೆಳಗಾವಿ ಜಿಲ್ಲೆಯ ವಂಟಮುರಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆ 4 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಯುವತಿಯ ಅಪಹರಣ ಆರೋಪ ಹಿನ್ನೆಲೆಯಲ್ಲಿ ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಹನಮವ್ವ ದುರಗಪ್ಪ ಮೆಡ್ಲೆರಿ (50) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು ಎಂದು ಹೇಳಲಾಗಿದೆ. ಈಕೆಯ ಮಗ ಮಂಜುನಾಥ ಎಂಬವರು ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ.
ಹನುಮವ್ವಳ ಮಗ ಯುವತಿಯನ್ನ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮಗ ಮಾಡಿದ ತಪ್ಪಿಗೆ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿ ಕ್ರೌರ್ಯ ಮೆರೆದಿದ್ದಾರೆ. ರಾಣೇಬೊನ್ನುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.