Home High Court/ಹೈಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

123
0
Karnataka BJP MLA’s Son BWSSB Chief Account officer Prashanthn Kumar Caught Taking Bribe Of Rs 40 Lakh

ಬೆಂಗಳೂರು:

ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಅವರನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು.

ಪ್ರಶಾಂತ್ ಮಾಡಾಳ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 8.23 ​​ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕೆಎಸ್‌ಡಿಎಲ್‌ ಅಧ್ಯಕ್ಷರೂ ಆಗಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಅವರು ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಪ್ರಕರಣ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ವಿರೂಪಾಕ್ಷಪ್ಪ ಅವರಿಗೆ ಮಾರ್ಚ್ 4 ರಂದು ಹೈಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಹೈಕೋರ್ಟ್‌ ಇದೇ ಮಾರ್ಚ್ 27ರಂದು ಆದೇಶ ಹೊರಡಿಸಿತ್ತು. ಅದೇ ದಿನ ರಾತ್ರಿ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಏಪ್ರಿಲ್ 15ರಂದು ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶಾಸಕ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಮಾಡಾಳ್ ವಿರೂಪಾಕ್ಷ ಅವರು, ಸುಮಾರು 15 ದಿನಗಳ ಜೈಲು ವಾಸದ ಬಳಿ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here