Home ಬೆಂಗಳೂರು ನಗರ ಬೆಂಗಳೂರು ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: PIL ವಜಾ

ಬೆಂಗಳೂರು ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: PIL ವಜಾ

148
0
Karnataka High Court

ಬೆಂಗಳೂರು:

ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್‌ ವಜಾಗೊಳಿಸಿದೆ.

ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್‌ ಶೋಗೆ ಅನುಮತಿ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ.ವಿಜಯ್ ಕುಮಾರ್ ಅವರಿದ್ದ ಪೀಠ, ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಭಾನುವಾರ ಬೆಳಗ್ಗೆ ಒಂಬತ್ತು ಗಂಟೆಯಿಂದ 11.30ರ ವರೆಗೆ ರೋಡ್ ಶೋಗೆ ಅನುಮತಿ ನೀಡಿದೆ.

ವಕೀಲ ಎನ್‌ ಪಿ ಅಮೃತೇಶ್‌ ಅವರು ಈ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಧ್ಯಾಹ್ನ 2:30 ವಿಚಾರಣೆ ಬಂದಿದೆ. ರಾಜ್ಯ ಬಿಜೆಪಿಯು ರೋಡ್‌ ಶೋ ನಡೆಸುವುದಕ್ಕೆ ನೀಡಿರುವ ಅನುಮತಿ, ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರ, ಪೊಲೀಸ್‌ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಬೆಂಗಳೂರಿನಲ್ಲಿ 36 ಕಿ ಮೀ ವ್ಯಾಪ್ತಿಯಲ್ಲಿ ಮೋದಿ ರೋಡ್‌ ಶೋ ನಡೆಸಲು ಉದ್ದೇಶಿಸಲಾಗಿದ್ದು, ಇದು ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ ರೋಡ್‌ ಷೋ ಆರಂಭವಾಗಲಿದ್ದು, 45 ವಿಧಾನಸಭಾ ಕ್ಷೇತ್ರಗಳನ್ನು ಇದು ಒಳಗೊಳ್ಳಲಿದೆ. ಸಂಜೆ 4ಕ್ಕೆ ಮತ್ತೆ ರೋಡ್‌ ಶೋ ಆರಂಭವಾಗಲಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ಇದು ನಡೆಯಲಿದೆ.

ಬೆಂಗಳೂರಿನ ಪ್ರಮುಖ 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್‌ ಷೋ ಹಾದು ಹೋಗಲಿದ್ದು, ಇಲ್ಲಿ ಹಲವು ವಾಣಿಜ್ಯ ಮತ್ತು ಜನವಸತಿ ಪ್ರದೇಶಗಳು ಇವೆ. ರೋಡ್‌ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸಂಸದ ಪಿ ಸಿ ಮೋಹನ್‌ ಹೇಳಿದ್ದಾರೆ. ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಜನರು ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಉಂಟಾಗುವ ನಷ್ಟವನ್ನು ರಾಜಕೀಯ ಪಕ್ಷಗಳು ತುಂಬಿಕೊಡುವುದಿಲ್ಲ ಎಂದು ವಿವರಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಕಚೇರಿಗೆ ಹೋಗುವವರಿಗೆ ಭಾರಿ ಸಮಸ್ಯೆಯಾಗಲಿದೆ. ಹೀಗಾಗಿ ರೋಡ್‌ ಶೋ ನಿರ್ಬಂಧಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here